ಹೈ ಕೋರ್ಟ್ ಆದೇಶದಂತೆ 15,000 ಶಿಕ್ಷಕರ ಹೊಸ ಪಟ್ಟಿ ಪ್ರಕಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಹೈಕೋರ್ಟ್ ಆದೇಶ ದಂತೆ ತಂದೆಯ ಆದಾಯ ಪ್ರಮಾಣ ಪತ್ರ ಸಲ್ಲಿಸಿರುವ ವಿವಾಹಿತ ಮಹಿಳಾ ಅಭ್ಯರ್ಥಿಗಳನ್ನೂ ಪರಿಗಣಿಸಿ 1:1 ಅನುಪಾತದಲ್ಲಿ ಹೊಸ ತಾತ್ಕಾಲಿಕ ಪಟ್ಟಿಯನ್ನು ಸೋಮವಾರ ತನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ ಎಂದು ವರದಿ ತಿಳಿಸಿದೆ.


15 ಸಾವಿರ ಶಿಕ್ಷಕರ ಹುದ್ದೆಗಳಿಗೆ ಪರೀಕ್ಷೆ ನಡೆಸಿದ್ದ ಶಿಕ್ಷಣ ಇಲಾಖೆಯು 2022ರ ನವೆಂಬರ್ನಲ್ಲಿ 1:1 ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿತ್ತು ಎನ್ನಲಾಗಿದೆ.

Scroll to Top