(ನ್ಯೂಸ್ ಕಡಬ) newskadaba.com. ಬೆಂಗಳೂರು . ಫೆ.28. ವೇತನ ಪರಿಷ್ಕರಣೆಗೆ ಆಗ್ರಹಿಸಿ, 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ನಾಳೆಯಿಂದ ಅನಿರ್ದಿಷ್ಟಾವಧಿಗೆ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಯಲಿದೆ.
ಈ ಬಾರಿಯ ಬಜೆಟ್ ನಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಪ್ರಸ್ತಾಪ ಮಾಡಿಲ್ಲ, ಇದನ್ನು ಖಂಡಿಸಿ ಹೊಸ ಪಿಂಚಣಿ ನೀತಿ ರದ್ಧತಿಗೆ ಆಗ್ರಹಿಸಿ 5.11 ಲಕ್ಷ ನೌಕರರು ನಾಳೆಯಿಂದ ಅನಿರ್ದಿಷ್ಟಾವಧಿಯವರೆಗೆ ಮುಷ್ಕರ ನಡೆಸಲಿದ್ದಾರೆ. ಇದರಿಂದ ಶಾಲೆ-ಕಾಲೇಜು, ತ್ಯಾಜ್ಯ ವಿಲೇವಾರಿ, ಕಂದಾಯ ಮತ್ತು ಆರೋಗ್ಯ ಸೇವೆಗಳಲ್ಲಿ ವ್ಯತ್ಯಯವುಂಟಾಗಲಿದೆ.
ನೌಕರರ ಸಂಘ ಕರೆ ನೀಡಿರುವ ಮುಷ್ಕರಕ್ಕೆ ಗ್ರಾಮ ಪಂಚಾಯತಿ ಸಿಬ್ಭಂದಿ, ನಗರ ಸ್ಥಳೀಯ ಸಂಸ್ಥೆಗಳು, ಬಿಬಿಎಂಪಿ ಕಾಯಂ ಪೌರ ಕಾರ್ಮಿಕರು, ಉಪ ನೋಂದಣಾಧಿಕಾರಿ ಕಚೇರಿ ಸಿಬ್ಬಂದಿ ಬೆಂಬಲ ಸೂಚಿಸಿದ್ದಾರೆ. ಗ್ರಾಮ ಲೆಕ್ಕಿಗರಿಂದ ಹೆಚ್ಚುವರಿ ಜಿಲ್ಲಾಧಿಕಾರಿಯವರೆಗೆ ಸಿಬ್ಬಂದಿ ಕರ್ತವ್ಯಕ್ಕೆ ಗೈರುಹಾಜರಾಗುತ್ತಿದ್ದು, ಬಹುತೇಕ ಸೇವೆಗಳು ವ್ಯತ್ಯಯವಾಗಲಿದೆ.