ವಿದ್ಯುತ್ ತಗುಲಿ ತಾಯಿ-ಮಗು ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ವಿದ್ಯುತ್ ತಗುಲಿ ತಾಯಿ ಮತ್ತು ಆಕೆಯ ನಾಲ್ಕು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಬೆಂಗಳೂರು ಹೊರವಲಯ ಹೊಸ ಕೋಟೆಯಲ್ಲಿ ನಡೆದಿದೆ. ಮೃತರನ್ನು ಜ್ಯೋತಿ (25) ಮತ್ತು ಆಕೆಯ ಮಗ ಜಯಾನಂದ್ ಎಂದು ಗುರುತಿಸಲಾಗಿದೆ.


ಗಾರೆ ಕೆಲಸಕ್ಕೆಂದು ಕುಟುಂಬ ಸಮೇತರಾಗಿ ಬಂದಿದ್ದ ಜ್ಯೋತಿ ಹೊಸಕೋಟೆ ತಾಲೂಕಿನ ಕನಕ ನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಜ್ಯೋತಿ ಅವರು ಭಾನುವಾರ ಮಧ್ಯಾಹ್ನ ಶೌಚಾಲಯದಲ್ಲಿ ನೀರು ಕಾಯಿಸಲು ಬಕೆಟ್ ನಲ್ಲಿ ಹೀಟರ್ ಹಾಕಿದ್ದಾಗ ಶೌಚಾಲಯಕ್ಕೆ ಬಾಲಕ ಹೋಗಿದ್ದು, ಹೀಟರ್ ನ್ನು ಮೈ ಮೇಲೆ ಬೀಳಿಸಿಕೊಂಡಿದ್ದಾನೆ ಎನ್ನಲಾಗಿದೆ.

Also Read  ಮತ್ತೆ ನಾಡಿಗೆ ಲಗ್ಗೆಯಿಟ್ಟ ಕಾಡಾನೆ ➤ ಕಾಡಾನೆ ದಾಳಿಗೆ ಇಬ್ಬರು ಬಲಿ

error: Content is protected !!
Scroll to Top