(ನ್ಯೂಸ್ ಕಡಬ)newskadaba.com ಆವಂತಿಪೋರ, ಫೆ.28. ಜಮ್ಮು-ಕಾಶ್ಮೀರದ ಅವಂತಿಪೋರಾದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಕಾರ್ಯಾಚರಣೆ ಪ್ರಗತಿಯಲ್ಲಿದೆ.
ಈ ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ವರದಿಯಾಗಿದೆ. ಉಗ್ರನ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಎನ್ ಕೌಂಟರ್ ನಡೆಯುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.