ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೋರ್ವನ ಬರ್ಬರ ಹತ್ಯೆ    

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ ನಾಯಂಡಹಳ್ಳಿ ಚೆಟ್ಟೀಸ್ ಪೆಟ್ರೋಲ್ ಬಂಕ್ ಬಳಿಯ ಮನೆಯಲ್ಲಿ ನಡೆದಿದೆ. ಲಿಯಾಖತ್ ಅಲಿಖಾನ್ (44) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ರಾತ್ರಿ ಜಿಮ್ ಗೆ ಹೋಗಿದ್ದ ಲಿಯಾಖತ್ ಅಲಿಖಾನ್ ನಾಪತ್ತೆಯಾಗಿದ್ದ. ಈ ಹಿನ್ನೆಲೆಯಲ್ಲಿ ಲಿಯಾಖತ್ ಅಲಿಖಾನ್ ಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಬಳಿಕ ಬೆಳಗಿನ ಜಾವ ಮತ್ತೊಂದು ಮನೆಯಲ್ಲಿ ಲಿಯಾಕತ್ ಶವವಾಗಿ ಪತ್ತೆ ಆಗಿದ್ದಾನೆ.

Also Read  ರಾಜ್ಯದಲ್ಲಿ ಮತ್ತೆ ಓಡಾಡಲಿವೆ ಡಬಲ್ ಡೆಕ್ಕರ್ ಬಸ್.!

 

error: Content is protected !!
Scroll to Top