(ನ್ಯೂಸ್ ಕಡಬ) newskadaba.com. ಬೆಂಗಳೂರು . ಫೆ.28. ರಾಜ್ಯ ಸರ್ಕಾರಿ ನೌಕರರು ಡಿಸೆಂಬರ್ 31 ರೊಳಗೆ ಕಂಪ್ಯೂಟರ್ ಕಡ್ಡಾಯವಾಗಿ ಕಲಿಯದಿದ್ದರೆ ಹುದ್ದೆಯಲ್ಲಿ ಮುಂಬಡ್ತಿ, ವಾರ್ಷಿಕ ವೇತನ ಭಡ್ತಿ ಇಲ್ಲ ನೀಡಲಾಗುವುದಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗೆ ತಿದ್ದುಪಡಿ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈವರೆಗೆ ಅಧಿಸೂಚನೆ ಹೊರಡಿಸಿದ 10 ವರ್ಷದೊಳಗೆ ಪರೀಕ್ಷೆ ಪಾಸ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಅದಕ್ಕಾಗಿ 2012 ರಲ್ಲೇ ಸರ್ಕಾರ ನಿಯಮ ಜಾರಿಗೊಳಿಸಿತ್ತು.