ನ್ಯೂಸ್ ಕಡಬ) newskadaba.com. ಹೊಸಪೇಟೆ. ಫೆ.28. ಹಂಪಿಯ ಹೇಮಕೂಟ ಬೆಟ್ಟದಲ್ಲಿ ಯುವಕರು ಕುಣಿದು ಕುಪ್ಪಳಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, 14ನೇ ಶತಮಾನದ ಪುರಾತನ ಸ್ಮಾರಕದ ಮಂಟಪಕ್ಕೆ ಹತ್ತುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ವಿರೋಧ ವ್ಯಕ್ತವಾಗಿ ಹಂಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವಿಡಿಯೋ ಆಧರಿಸಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕಳೆದ ವಾರ ಹಂಪಿಯ ಪವಿತ್ರ ಪುರಂದರ ಮಂಟಪದಲ್ಲಿ ವಿದೇಶಿಗರ ಗುಂಪು ಪಾರ್ಟಿ ಮಾಡುತ್ತಿರುವುದು ಕಂಡು ಬಂದಿತ್ತು. ಇಂತಹ ಘಟನೆಗಳು ನಡೆಯದಂತೆ ಹೆಚ್ಚುವರಿ ಸಿಬಂದಿಗಳನ್ನು ನಿಯೋಜಿಸಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.