(ನ್ಯೂಸ್ ಕಡಬ) newskadaba.com ಕಡಬ, ಡಿ.31. ಕಾರುಗಳೆರಡರ ಮಧ್ಯೆ ಢಿಕ್ಕಿ ಸಂಭವಿಸಿ ಆರು ಜನ ಗಾಯಗೊಂಡ ಘಟನೆ ಸುಬ್ರಹ್ಮಣ್ಯ ಧರ್ಮಸ್ಥಳ ರಾಜ್ಯ ಹೆದ್ದಾರಿಯ ನೆಟ್ಟಣ ಚರ್ಚ್ ಮುಂಭಾಗದಲ್ಲಿ ಭಾನುವಾರದಂದು ನಡೆದಿದೆ.
ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಮೈಸೂರು ಮೂಲದವರಿದ್ದ ಸ್ವಿಫ್ಟ್ ಕಾರು ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟೊಯೋಟಾ ಕೊರೊಲ್ಲಾ ಕಾರು ನಡುವೆ ಢಿಕ್ಕಿ ಸಂಬಂಧಿಸಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಎರಡೂ ಕಾರಿನಲ್ಲಿದ್ದ ಆರು ಜನ ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.