7ನೇ ವೇತನ ಆಯೋಗ ಜಾರಿಗೆ ಬದ್ಧ ಎಂದ ಬೊಮ್ಮಾಯಿ ➤ ಪ್ರತಿಭಟನೆ ನಿಲ್ಲಿಸ್ತಾರಾ ಸರ್ಕಾರಿ ನೌಕರರು ?

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಫೆ. 28. 7 ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುವ ಬೇಡಿಕೆಯನ್ನು ಈಡೇರಿಸದಿದ್ದರೆ ಮಾರ್ಚ್ 1 ರಿಂದ ರಾಜ್ಯದಲ್ಲಿ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಘೋಷಿಸಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು , 7 ನೇ ವೇತನ ಆಯೋಗದ ಮಧ್ಯಂತರ ವರದಿ ಸಿದ್ದಪಡಿಸುತ್ತಿದ್ದೇವೆ ಎಂದು ಹೇಳಿದ್ದಾರೆ.


ಈ ಕುರಿತು ಹುಬ್ಭಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, 2023-24 ನೇ ಸಾಲಿನಲ್ಲಿಯೇ ಅನುಷ್ಠಾನಕ್ಕೆ ತರುತ್ತೇವೆ. ಬಜೆಟ್ ನಲ್ಲಿ 7 ವೇತನ ಆಯೋಗ ಜಾರಿಗೆ ಹಣ ತೆಗೆದಿಟ್ಟಿದ್ದೇವೆ. ಮಧ್ಯಂತರ ವರದಿ ಬಂದ ಕೂಡಲೇ ಜಾರಿಮಾಡುವುದಾಗಿ ತಿಳಿಸಿದ್ದಾರೆ.

Also Read  ಅನ್ಯಕೋಮಿನ ಜೋಡಿಯ ಮದುವೆ- ಪ್ರಕರಣ ತಡವಾಗಿ ಬೆಳಕಿಗೆ ➤ ಹಿಂದೂ ಸಂಘಟನೆಗಳಿಂದ ಆಕ್ರೋಶ...!!

error: Content is protected !!
Scroll to Top