ಬ್ಯೂಟಿ ಪಾರ್ಲರ್​ ಹೆಸರಿನಲ್ಲಿ ಸಿಂಥೆಟಿಕ್​ ಡ್ರಗ್​ ಮತ್ತು ಸ್ಟ್ಯಾಂಪ್​ ಮಾರಾಟ          ➤ ಓರ್ವ ಮಹಿಳೆ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕೊಚ್ಚಿ, ಫೆ.28. ಬ್ಯೂಟಿ ಪಾರ್ಲರ್​ ಹೆಸರಿನಲ್ಲಿ ಸಿಂಥೆಟಿಕ್​ ಡ್ರಗ್​ ಮತ್ತು ಸ್ಟ್ಯಾಂಪ್​ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಕೇರಳದ ಅಬಕಾರಿ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತ ಮಹಿಳೆಯನ್ನು ಶೀಲಾ ಸನ್ನಿ (51) ಎಂದು ಗುರುತಿಸಲಾಗಿದೆ. ಈಕೆ ಕೇರಳದ ತ್ರಿಸ್ಸೂರ್​ ಜಿಲ್ಲೆಯ ನಾಯರಂಗಡಿ ನಿವಾಸಿ. ಚಲಕುಡಿಯಲ್ಲಿ ಬ್ಯೂಟಿ ಪಾರ್ಲರ್​ ಇಟ್ಟುಕೊಂಡಿದ್ದಳು. ಆದರೆ, ಪಾರ್ಲರ್​ ಒಳಗೆ ಡ್ರಗ್ಸ್​ ಮತ್ತು ಸ್ಟ್ಯಾಂಪ್​ ಮಾರಾಟದಂತಹ ಅಕ್ರಮ ವ್ಯವಹಾರ ನಡೆಸುತ್ತಿದ್ದಳು. ಇರಿಂಜಲಕುಡ ವೃತ್ತದ ಕಚೇರಿಯಲ್ಲಿ ದೊರೆತ ರಹಸ್ಯ ಮಾಹಿತಿ ಮೇರೆಗೆ ಅಬಕಾರಿ ನಿರೀಕ್ಷಕ ಕೆ.ಸತೀಶನ್ ನೇತೃತ್ವದ ತಂಡ ಆಕೆಯನ್ನು ಬಂಧಿಸಿದೆ.

Also Read  ಬೆಳ್ಳಾರೆ: ಬೆಳ್ಳಂಬೆಳಗ್ಗೆ ಎನ್ಐಎ ದಾಳಿ- ಪರಿಶೀಲನೆ

 

error: Content is protected !!
Scroll to Top