ನಾಳೆಯಿಂದ ಆಸ್ಪತ್ರೆ ಸೇರಿದಂತೆ ಎಲ್ಲಾ ಸೇವೆ ಬಂದ್ ➤ ಸರಕಾರಿ ನೌಕರರ ಸಂಘ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 28. 7ನೇ ವೇತನ ಆಯೋಗ ಜಾರಿಗೆ ನಾಳೆಯಿಂದ ಹಮ್ಮಿಕೊಳ್ಳಲಾಗಿರುವ ಮುಷ್ಕರದ ಹಿನ್ನೆಲೆ ರಾಜ್ಯದಲ್ಲಿ ಎಲ್ಲ ಸರ್ಕಾರಿ ಸೇವೆ ಬಂದ್‌ ಆಗಲಿವೆ ಎಂದು ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಕ್ಷರಿ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಳೆ ಯಾವ ಇಲಾಖೆಯ ನೌಕರರೂ ಕೆಲಸಕ್ಕೆ ಹಾಜರಾಗುವುದಿಲ್ಲ. ಯಾವುದೇ ಸಂಧಾನಕ್ಕೆ ಮಣಿಯುವುದಿಲ್ಲ, ಯಾವುದೇ ಕ್ರಮ ಕೈಗೊಂಡರೂ ಸಹ ಎದುರಿಸಲು ಸಿದ್ಧ. ಆಯೋಗ ವರದಿ ಜಾರಿಯಾದರೆ ಮಾತ್ರ ಮುಷ್ಕರ ಹಿಂದಕ್ಕೆ ಪಡೆಯಲಾಗುವುದು. ಒಂದು ವೇಳೆ ಎಸ್ಮಾ ಜಾರಿಗೊಳಿಸಿದರೂ ಹೆದರುವುದಿಲ್ಲ ಎಂದಿದ್ದಾರೆ. ಈ ಮುಷ್ಕರದಿಂದಾಗಿ ಜನಸಾಮಾನ್ಯರಿಗೆ ತೀವ್ರ ತೊಂದರೆಯುಂಟಾಗುವ ಸಾಧ್ಯತೆಯಿದ್ದು, ಆಸ್ಪತ್ರೆ ಸೇರಿದಂತೆ ತುರ್ತು ಸೇವೆ ಪಡೆಯುವವರಿದ್ದರೆ ಅದಕ್ಕೆ ಇಂದೇ ಸೂಕ್ತ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವುದು ಉತ್ತಮ. ಏಕೆಂದರೆ ನಾಳೆ ಸರ್ಕಾರಿ ಆಸ್ಪತ್ರೆಗಳ ಯಾವುದೇ ಓಪಿಡಿ ಇರುವುದಿಲ್ಲ. ಕೇವಲ ತುರ್ತು ಚಿಕಿತ್ಸೆ ಮಾತ್ರ ಲಭ್ಯವಿರುತ್ತದೆ ಎಂದು ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ವಿವೇಕ್‌ ದೊರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ 3 ಪ್ರಮುಖ ಆಸ್ಪತ್ರೆ, 105 ಪಿಎಸ್‌ಸಿ ಸೆಂಟರ್‌, 19 ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳ ಓಪಿಡಿ ಬಂದ್‌ ಆಗುವುದಾಗಿ ಹೇಳಿದ್ದಾರೆ.

Also Read  ಮಣಿಪಾಲ: ಚಿರತೆಯನ್ನು ಬೋನಿಗೆ ಬೀಳಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿ

error: Content is protected !!
Scroll to Top