ಅತ್ಯುತ್ತಮ ಫಿಫಾ ಆಟಗಾರ ಪ್ರಶಸ್ತಿ ಗೆದ್ದ ಮೆಸ್ಸಿ

(ನ್ಯೂಸ್ ಕಡಬ) newskadaba.com ಪ್ಯಾರಿಸ್, ಫೆ. 28. ಅರ್ಜೆಂಟೀನಾ ಫುಟ್ಬಾಲ್ ತಂಡದ ನಾಯಕ ಲಿಯೋನೆಲ್ ಮೆಸ್ಸಿ 2022ರ ಅತ್ಯುತ್ತಮ ಫಿಫಾ ಪುರುಷ ಆಟಗಾರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ.

ಪ್ಯಾರಿಸ್ ಸೇಂಟ್ ಜರ್ಮೈನ್ (ಪಿಎಸ್ಜಿ) ತಂಡದ ಸಹ ಆಟಗಾರ ಕೈಲಿಯನ್ ಎಂಬಪ್ಪೆ ಮತ್ತು ರಿಯಲ್ ಮ್ಯಾಡ್ರಿಡ್ ನಾಯಕ ಕರೀಮ್ ಬೆಂಜೆಮಾ ಅವರೂ ಈ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದ್ದರು. ಕೊನೆಗೆ ಪ್ರಶಸ್ತಿಯು ಮೆಸ್ಸಿ ಪಾಲಾಗಿದೆ.

Scroll to Top