ಶಾಸಕ ತನ್ವೀರ್ ಸೇಠ್ ರಾಜಕೀಯ ನಿವೃತ್ತಿ ➤ ಇಬ್ಬರು ಅಭಿಮಾನಿಗಳಿಂದ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಮೈಸೂರು, ಫೆ. 28. ರಾಜ್ಯ ವಿಧಾನಸಭಾ ಚುನಾವನೆಗೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ ಶಾಸಕ ತನ್ವೀರ್‌ ಸೇಠ್‌ ಅನಾರೋಗ್ಯದ ನೆಪಹೇಳಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುತ್ತಿದ್ದೇನೆ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ತನ್ವೀರ್‌ ಸೇಠ್‌ ಅವರ ಇಬ್ಬರು ಅಭಿಮಾನಿಗಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ.

ಶಾಸಕ ತನ್ವೀರ್‌ಸೇಠ್ ಅವರು ಚುನಾವಣೆ ಹತ್ತಿರ ಬರುತ್ತಿದ್ದಂತಯೇ‌ ಕಾಂಗ್ರೆಸ್‌ಗೆ ಬಿಗ್ ಶಾಕ್ ನೀಡಿದ್ದಾರೆ. ನಾನು ಚುನಾವಣೆಗೆ ನಿಲ್ಲಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ಡಿಸೆಂಬರ್‌ನಲ್ಲಿ ಪತ್ರ ಬರೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅನಾರೋಗ್ಯದ ಕಾರಣ ನೀಡಿ ಚುನಾವಣಾ ರಾಜಕೀಯದಿಂದ ನಿವೃತ್ತಿಗೆ ಮುಂದಾಗಿದ್ದಾರೆ. ಈ ಪತ್ರದ ಬಗ್ಗೆ ಯಾರಿಗೂ ತಿಳಿಯದಂತೆ ಸೂಚನೆ ನೀಡದ್ದರಿಂದ ಶಾಸಕರು ಗೌಪ್ಯವಾಗಿಟ್ಟಿದ್ದರು.

Also Read  ಆಯುಷ್ಮಾನ್ ಭಾರತ್ ಕಾರ್ಡ್ ನಲ್ಲಿ ಕೋವಿಡ್ ಚಿಕಿತ್ಸೆ ಸೇರ್ಪಡೆ

ಇಂದು ಬೆಳಗ್ಗೆ ತನ್ವೀರ್‌ ಸೇಠ್‌ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬ ವಿಚಾರ ತಿಳಿಯುತ್ತಿದ್ದಂತೆಯೇ ಶಾಸಕರ ಮನೆಯ ಬಳಿ ಆಗಮಿಸಿದ ನೂರಾರು ಬೆಂಬಲಿಗರು ಸ್ಪರ್ಧೆ ಮಾಡುವಂತೆ ಆಗ್ರಹಿಸಿದ್ದಾರೆ. ಕಾಲಿಗೆ ಬಿದ್ದು ಬೇಡಿಕೊಂಡಿದ್ದಾರೆ. ಈ ವೇಳೆ ಓರ್ವ ಅಭಿಮಾನಿ ರಸೂಲ್ ಎಂಬಾತ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು,  ಪೊಲೀಸರು ಹಾಗೂ ಇತರೆ ಕಾರ್ಯಕರ್ತರು ಅವರ ಮೇಲೆ ನೀರು ಅದ್ದಿದ ಬಟ್ಟೆಗಳನ್ನು ಸುತ್ತಿ ರಕ್ಷಣೆ ಮಾಡಿದ್ದಾರೆ. ಮತ್ತೋರ್ವ ಬೆಂಬಲಿಗ ಸೈಯದ್ ಇಕ್ಬಾಲ್ ಎಂಬಾತ ತನ್ವೀರ್ ಸೇಠ್ ಮನೆ ಮೇಲೆ ಹತ್ತಿ, ಚುನಣಾವೆಗೆ ಸ್ಪರ್ಧೆ ಮಾಡುವ ಬಗ್ಗೆ ಘೋಷಣೆ ಮಾಡುವಂತೆ ಆಗ್ರಹಿಸಿ ಆತ್ಮಹತ್ಯೆ ಯತ್ನಿಸಿದ್ದಾನೆ. ತಕ್ಷಣ ಇಕ್ಬಾಲ್‌ ನನ್ನು ಪೊಲೀಸರು ಹಾಗೂ ಬೆಂಬಲಿಗರು ತಡೆದಿದ್ದು. ಮನೆಯ ಆವರಣದ ಸ್ಥಳದಲ್ಲೇ ತನ್ವೀರ್‌ಗೆ ಕುರ್ಚಿ ಹಾಕಿ ಕೂರಿಸಿದ ಬೆಂಬಲಿಗರು ಸ್ಪರ್ಧೆ ಮಾಡುವಂತೆ ಮನವೊಲಿಕೆ ಮಾಡುತ್ತಿದ್ದಾರೆ.

Also Read  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ಗೆ ಆದೇಶ

error: Content is protected !!
Scroll to Top