ಸಾಹಿತ್ಯ ಸಮ್ಮೇಳನಕ್ಕೆ 25 ಕೋಟಿ ರೂ. ಖರ್ಚು     ➤ ಹಿಂದಿನ ಸಮ್ಮೇಳನಕ್ಕಿಂತ ದುಪ್ಪಟ್ಟಾದ ವೆಚ್ಚ

(ನ್ಯೂಸ್ ಕಡಬ)newskadaba.com ಹಾವೇರಿ, ಫೆ.28. ಹಾವೇರಿ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಬೇಕು ಎಂಬ ಹಲವು ವರ್ಷಗಳ ಬೇಡಿಕೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಡೇರಿಸಿದ್ದರು.

ಸಿಎಂ ತವರು ಜಿಲ್ಲೆಯಲ್ಲಿ ಅಕ್ಷರ ಜಾತ್ರೆಗೆ 20 ಕೋಟಿರೂ. ಅನುದಾನ ಕೊಟ್ಟಿದ್ದರು. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್‌ ಸಮ್ಮೇಳನ ನಡೆಸೋಕೆ 25 ಕೋಟಿ ಖರ್ಚಾಗಿದೆ ಎಂದು ಹೇಳಿದ್ದಾರೆ. ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ನೀಡಿದ್ದ ಅನುದಾನಕ್ಕಿಂತ 5 ಕೋಟಿ ರೂ. ಹೆಚ್ಚುವರಿಯಾಗಿ ಖರ್ಚಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ, ಇದು ಸಾಹಿತ್ಯ ಸಮ್ಮೇಳನದ ಇತಿಹಾಸದಲ್ಲೇ ದಾಖಲೆಯ ವೆಚ್ಚವಾಗಿದೆ.

Also Read  ಶಕ್ತಿ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯೋತ್ಸವ

 

error: Content is protected !!