(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ಕೇಂದ್ರ ರೈಲ್ವೆ ಸಚಿವಾಲಯ ಕಲಬುರಗಿ-ಬೀದರ್ ಜನರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಜಿಲ್ಲೆಗಳ ನಡುವೆ ಮತ್ತೊಂದು ರೈಲು ಓಡಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ಈ ಮೂಲಕ ಈ ಭಾಗದ ಜನರ ಬಹುಕಾಲದ ಬೇಡಿಕೆಗೆ ಹಸಿರು ನಿಶಾನೆ ತೋರಿಸಿದೆ.
ಕಲಬುರಗಿಯ ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ಅವರು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಈ ಹಿಂದೆ ಪತ್ರ ಬರೆದು ಕಲಬುರಗಿ-ಬೀದರ್ ನಡುವೆ ಮತ್ತೊಂದು ರೈಲು ಸಂಚಾರ ಆರಂಭಿಸಬೇಕು ಎಂದು ಮನವಿ ಮಾಡಿದ್ದರು ಎನ್ನಲಾಗಿದೆ.