ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಕಾರು ಢಿಕ್ಕಿ ➤ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಚೆನ್ನೈ, ಫೆ. 28. ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ತಿರುಪತ್ತೂರ್ ನ ವಾಣಿಯಂಪಾಡಿನಲ್ಲಿ ಮಂಗಳವಾರದಂದು ನಡೆದಿದೆ.

ಮೃತ ವಿದ್ಯಾರ್ಥಿಗಳನ್ನು 7ನೇ ತರಗತಿ ವಿದ್ಯಾರ್ಥಿಗಳಾದ ವಿಜಯ್(13), ರಫೀಕ್(13) ಮತ್ತು ಸೂರ್ಯ(13) ಎಂದು ಗುರುತಿಸಲಾಗಿದೆ. ಗಿರಿಸಮುಥಿರಂನಲ್ಲಿರುವ ಸರ್ಕಾರಿ ಶಾಲೆಗೆ ತೆರಳಲು ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ವಿದ್ಯಾರ್ಥಿಗಳ ಗುಂಪು ಸೈಕಲ್‌ ನಲ್ಲಿ ಸಾಗುತ್ತಿದ್ದ ವೇಳೆ ವೆಲ್ಲೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ವೇಗವಾಗಿ ಬಂದ ಕಾರು ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದು, ಬಳಿಕ ಮರಕ್ಕೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Scroll to Top