ರಾಜ್ಯ ಸರ್ಕಾರಿ ನೌಕರರ ಮುಷ್ಕರ ➤ ಹಲವು ಜಿಲ್ಲೆಗಳಲ್ಲಿ ಇಂದು ನಡೆಯಬೇಕಿದ್ದ ಪರೀಕ್ಷೆಗಳು ಮುಂದೂಡಿಕೆ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ.01.  7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ  ನಡೆಸುತ್ತಿದ್ದಾರೆ.  ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಯ ಸುಮಾರು 10 ಲಕ್ಷ ನೌಕರರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ.

ಇದರಿಂದ ಪರೀಕ್ಷೆಗಳಿಗೂ ರಾಜ್ಯ ಸರ್ಕಾರಿ ನೌಕರರ ಮುಷ್ಕರ ಬಿಸಿ ತಟ್ಟಿದೆ. ಇಂದು ಬೆಂಗಳೂರು ದಕ್ಷಿಣ ಜಿಲ್ಲೆ, ಬಾಗಲಕೋಟೆಯಲ್ಲಿ ಪದವಿಪೂರ್ವ ಕಾಲೇಜುಗಳ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಇನ್ನು ಕಲಬುರಗಿಯಲ್ಲಿ ಎಸ್​ಎಸ್​ಎಲ್​ಸಿ ಪೂರ್ವಬಾವಿ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Scroll to Top