ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹೃದಯಾಘಾತ ➤ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com. ಹೈದರಾಬಾದ್, ಮಾ.01 ಯುವಕನೊಬ್ಬ ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಶ್ಯಾಮ್ ಯಾದವ್ ಮೃತ ಯುವಕ. ಹೈದರಾಬಾದ್‌ನ ಲಾಲಾಪೇಟ್‌ನಲ್ಲಿರುವ ಪ್ರೊ. ಜಯಶಂಕರ್ ಒಳಾಂಗಣ ಕ್ರೀಡಾಂಗಣದಲ್ಲಿ ಶ್ಯಾಮ್ ಯಾದವ್ ಅವರು ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್ ಆಡುತ್ತಿದ್ದರು. ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು.

ದಿನನಿತ್ಯ ಕಚೇರಿಯಿಂದ ಬಂದು ಬ್ಯಾಡ್ಮಿಂಟನ್ ಆಡಲು ಹೋಗುತ್ತಿದ್ದ ಶ್ಯಾಮ್ ಯಾದವ್ ಎಂದಿನಂತೆ ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್ ಆಡಲು ಹೋಗಿದ್ದ ವೇಳೆ ಈ ಘಟನೆ ನಡೆದಿದೆ.

Also Read  'ರೆಪೊ ದರ'ದಲ್ಲಿ ಬದಲಾವಣೆ ಇಲ್ಲ RBI ಗವರ್ನರ್

error: Content is protected !!
Scroll to Top