➤ ಬಿಲ್‌ಗೇಟ್ಸ್ ಭೇಟಿಯಾದ ಸಚಿನ್ ತೆಂಡೂಲ್ಕರ್ ದಂಪತಿ

(ನ್ಯೂಸ್ ಕಡಬ) newskadaba.com. ಮುಂಬೈ, ಮಾ 01.   ಮುಂಬೈ, ಮಾ 01  ಮೈಕ್ರೋಸಾಫ್ಟ್ ಸಂಸ್ಥೆಯ ಸಂಸ್ಥಾಪಕ ಬಿಲ್ ಗೇಟ್ಸ್ ಅವರನ್ನು ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ದಂಪತಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಪತ್ನಿ ಅಂಜಲಿ ಅವರೊಂದಿಗೆ ಸಚಿನ್ ಅವರು ಬಿಲ್‍ಗೇಟ್ಸ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಇನ್ನು ಮಕ್ಕಳ ಆರೋಗ್ಯ ರಕ್ಷಣೆ ವಿಚಾರದಲ್ಲಿ ತೊಡಗಿಸಿಕೊಂಡಿರುವ ಬಿಲ್‌ಗೇಟ್ಸ್ ಅವರೊಂದಿಗಿನ ಭೇಟಿ ನನಗೆ ಸಂತಸ ತಂದಿದೆ ಎಂದು ಸಚಿನ್ ಟ್ವೀಟ್ ಮಾಡಿದ್ದಾರೆ.

Also Read  ಉಗ್ರರ ಪರ ಗೋಡೆ ಬರಹ ಪ್ರಕರಣ ➤ ಆರೋಪಿ ಪರ ವಕಾಲತ್ತು ವಹಿಸದಂತೆ ರಾಮ್ ಸೇನಾ ಆಗ್ರಹ

ಮಕ್ಕಳ ಆರೋಗ್ಯ ಸೇರಿದಂತೆ ಹಲವು ವಿಚಾರಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲು ನಮಗೆ ಕಲಿಕೆಗೊಂದು ಅವಕಾಶ ಸಿಕ್ಕಂತಾಗಿದೆ. ಕಲ್ಪನೆಗಳನ್ನು ಹಂಚಿಕೊಳ್ಳುವುದರಿಂದ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸುವುದು, ಪರಿಹಾರ ಕಂಡುಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ ಎಂದೂ ಸಚಿನ್ ಬರೆದುಕೊಂಡಿದ್ದಾರೆ.

 

error: Content is protected !!
Scroll to Top