ಮಾಜಿ ಪ್ರಧಾನಿ ಎಚ್​​.ಡಿ. ದೇವೇಗೌಡ ಆಸ್ಪತ್ರೆಗೆ ದಾಖಲು        

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.01. ಮಾಜಿ ಪ್ರಧಾನಿ ಎಚ್​​.ಡಿ. ದೇವೇಗೌಡ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎಚ್ ಡಿಡಿ ಅವರು ಕಾಲುನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವೇಗೌಡರ ಆರೋಗ್ಯ ಸ್ಥಿತಿ ಅಷ್ಟೊಂದು ಉತ್ತಮವಾಗಿಲ್ಲ ಎಂದು ಎರಡು ದಿನಗಳ ಹಿಂದೆಯೇ ಕುಮಾರಸ್ವಾಮಿ ತಿಳಿಸಿದ್ದರು. ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆ ಬಗ್ಗೆ ದೇವೇಗೌಡರ ಸಮ್ಮುಖದಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ. ಈ ವಿಚಾರವಾಗಿ ದೇವೇಗೌಡರಿಗೆ ಹೆಚ್ಚಿನ ಹೊರೆ ನೀಡುವುದು ತನಗಿಷ್ಟವಿಲ್ಲ. ದೇವೇಗೌಡರ ಆರೋಗ್ಯವೇ ಮುಖ್ಯ ಎಂದು ಕುಮಾರಸ್ವಾಮಿ ಹೇಳಿದ್ದರು.

Also Read  ಇನ್ಸ್ಟಾಗ್ರಾಮ್ ಬಳಕೆದಾರರೇ ಎಚ್ಚರ.! ➤ ಭಾರತದಲ್ಲಿ ಇನ್ಸ್ಟಾಗ್ರಾಮ್ ಬ್ಯಾನ್

 

error: Content is protected !!
Scroll to Top