ಸರಕಾರಿ ನೌಕರರ ಸಂಘದ ಮುಷ್ಕರ ವಾಪಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.01. ಸರ್ಕಾರದ ಅಧಿಕೃತ ಆದೇಶದ ಬೆನ್ನಲ್ಲೇ ಅನಿರ್ದಿಷ್ಟ ಮುಷ್ಕರವನ್ನು ವಾಪಸ್ ತೆಗೆದುಕೊಂಡಿದ್ದೇವೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ತಿಳಿಸಿದರು.


ಏಪ್ರಿಲ್ 1 ರಿಂದ ಶೇ.17ರಷ್ಟು ವೇತನ ಹೆಚ್ಚಿಸಿ ಎಂದು ಸರ್ಕಾರ ಆದೇಶ ನೀಡಿದೆ. ಈ ಸರ್ಕಾರದ ಆದೇಶವನ್ನು ಸಾಮೂಹಿಕವಾಗಿ ಒಪ್ಪಿಕೊಳ್ಳುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಭರವಸೆಗಳು ಸಿಗುತ್ತವೆ ಎಂಬ ನಿರೀಕ್ಷೆಯಲ್ಲಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.


ಈ ಹಿನ್ನೆಲೆಯಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ವಾಪಸ್ ಪಡೆದಿದ್ದೇವೆ ಎಂದು ಮಾಹಿತಿ ನೀಡಿದರು.

Also Read  ಶಬ್ದಕ್ಕಿಂತ ಹೆಚ್ಚು ವೇಗವಾಗಿ ವಿಮಾನ ಹಾರಾಟ ನಡೆಸಿದ್ದ ಪೈಲಟ್‌ ಇನ್ನಿಲ್ಲ

 

error: Content is protected !!
Scroll to Top