ಲಂಚ ಸ್ವೀಕಾರ ➤ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಕ್ಸಿಕ್ಯೂಟಿವ್ ಆಫೀಸರ್

(ನ್ಯೂಸ್ ಕಡಬ) newskadaba.com. ಬೆಂಗಳೂರು,ಮಾ.1. ಬೆಂಗಳೂರು ಲಂಚ ಸ್ವೀಕರಿಸುತ್ತಿದ್ದ ವೇಳೆ ಬೆಸ್ಕಾಂ ಎಕ್ಸಿಕ್ಯೂಟಿವ್ ಆಫೀಸರ್ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ವಿದ್ಯಾ ಲೋಕಾಯುಕ್ತ ಬಲೆಗೆ ಬಿದ್ದ ಆಫೀಸರ್​. ಬೆಂಗಳೂರಿನ ಕಸ್ತೂರಿನಗರ ಸಬ್​ಡಿವಿಷನ್​ ವ್ಯಾಪ್ತಿಯ ಬೆನ್ನಿಗಾನಹಳ್ಳಿ ಘಟನೆ ನಡೆದಿದೆ.

ವಿದ್ಯುತ್ ಕಂಬ ತೆರವುಗೊಳಿಸಲು ಅರವಿಂದ ಎನ್ನುವವರಿಂದ 25 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಇಂದು ಮುಂಗಡವಾಗಿ 5 ಸಾವಿರ ರೂ. ಲಂಚ ಸ್ವೀಕರಿಸುವಾಗ ಬಲೆಗೆ ಬಿದಿದ್ದಾರೆ. ಸದ್ಯ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕೇಸ್ ದಾಖಲಿಸಿರುವ ಲೋಕಾಯುಕ್ತ ಪೊಲೀಸರು ಬೆಸ್ಕಾಂ ಇಒ ವಿದ್ಯಾರನ್ನು ವಶಕ್ಕೆ ಪಡೆದಿದ್ದಾರೆ.

error: Content is protected !!
Scroll to Top