(ನ್ಯೂಸ್ ಕಡಬ) newskadaba.com. ಬೆಂಗಳೂರು,ಮಾ.1. ಮುಂದಿನ ಮೂರು ದಿನಗಳ ಕಾಲ ಕೆಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಕೆಲವು ಕಡೆ ಬಿಸಿಲ ಝಳ ಗಣನೀಯವಾಗಿ ಹೆಚ್ಚಾಗಲಿದೆ. ರಾಷ್ಟ್ರ ರಾಜಧಾನಿ ದೆಹಲಿ, ಗುಜರಾತ್, ರಾಜಸ್ಥಾನ ಕರ್ನಾಟಕ, ದಂತಹ ರಾಜ್ಯಗಳಲ್ಲಿ ತಾಪಮಾನವು ಗಣನೀಯವಾಗಿ ಹೆಚ್ಚಾಗಿದೆ.
ಪ್ರತಿ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ಕಾಡುತ್ತಿದ್ದ ಬಿಸಿಲು ಈಗ ಫೆಬ್ರವರಿಯಲ್ಲೇ ಶುರುವಾಗಿದೆ. ಮುಂದಿನ 5 ದಿನಗಳವರೆಗೆ ವಾಯುವ್ಯ, ಮಧ್ಯ ಹಾಗೂ ಪೂರ್ವ ಭಾರತದಲ್ಲಿ ಗರಿಷ್ಠ ತಾಪಮಾನವು ಸರಾಸರಿಗಿಂತ ಮೂರರಿಂದ ಐದು ಡಿಗ್ರಿ ಸೆಲ್ಸಿಯಸ್ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.