ಕಡಬ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಕಡಬ, ಮಾ.02. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.


ಕಡಬ ತಾಲೂಕಿನ ರಾಮಕುಂಜ ಗ್ರಾಮದ ವೆಂಕಪ್ಪ ಪೂಜಾರಿ ಎಂಬವರ ಪುತ್ರ ಕಿಶೋರ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಕಡಬ ಠಾಣಾ ಹೆಚ್.ಸಿ ರಾಜುನಾಯ್ಕ ಮತ್ತು ಪಿಸಿ ಸಿರಾಜುದ್ದಿನ್ ಅವರು ಮಂಗಳೂರಿನಲ್ಲಿ ದಸ್ತಗಿರಿ ಮಾಡಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

Also Read  17ರ ವಯೋಮಾನದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ - ಕಡಬ ಸರಸ್ವತೀ ವಿದ್ಯಾಲಯದ ನಿಶ್ವಿತ್. ಪಿ ಪ್ರಥಮ

error: Content is protected !!
Scroll to Top