ಪಿಯು ಪರೀಕ್ಷೆಯಲ್ಲಿ ಹಿಜಾಬ್ ಧರಿಸಲು ಅನುಮತಿ ಇಲ್ಲ     ➤ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.02. ಹಿಜಾಬ್‌ ವಿಷಯವು ಸುಪ್ರೀಂ ಕೋರ್ಟ್‌ನಲ್ಲಿದೆ. ಹೀಗಾಗಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಸಮಯದಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡುವ ಪ್ರಶ್ನೆಯೇ ಇಲ್ಲ ಎಂದು ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ. 9ರಿಂದ ಆರಂಭವಾಗಲಿದೆ.

ಪರೀಕ್ಷೆಯಲ್ಲಿ ಹಿಜಾಬ್‌ಗೆ ಅನುಮತಿ ನೀಡುವಂತೆ ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪದವಿಪೂರ್ವ ಕಾಲೇಜುಗಳ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದ್ದರು.

Also Read  ಕುಂದಾಪುರ: ತಡರಾತ್ರಿ ನಿದ್ದೆಗಣ್ಣಿನಲ್ಲಿ ಮನೆಯಿಂದ 3 ಕಿ.ಮೀ ನಡೆದ ಬಾಲಕಿ

 

error: Content is protected !!
Scroll to Top