(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.03. ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ಅವರು ಆರೋಪಿ ಸಹಿತ ಮದ್ಯವನ್ನು ವಶಕ್ಕೆ ಪಡೆದುಕೊಂಡ ಘಟನೆ ಬ್ರಹ್ಮರಕೋಟ್ಲು ಎಂಬಲ್ಲಿ ನಡೆದಿದೆ.
ಕಳ್ಳಿಗೆ ಗ್ರಾಮದ ಜಾರಂದಗುಡ್ಡೆ ನಿವಾಸಿ ಅಶೋಕ ಬಂಧಿತ ಆರೋಪಿ. ಈತನಿಂದ 2217 ರೂ ಮೌಲ್ಯದ 90 ಎಂ.ಎಲ್.ನ ಮೈಸೂರು ಲ್ಯಾನ್ಸರ್ ವಿಸ್ಕಿ ಎಂಬ ಹೆಸರಿನ 10 ಮದ್ಯದ ಸ್ಯಾಚೇಟ್ ಹಾಗೂ 500 ರೂ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ.