ಹತ್ರಾಸ್‌ ದಲಿತ ಯುವತಿಯ ಮೇಲೆ ಗ್ಯಾಂಗ್‌ರೇಪ್‌ ಪ್ರಕರಣ ➤ ಪ್ರಮುಖ ಆರೋಪಿಗೆ ಜೀವಾವಧಿ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಮಾ.03. 2020ರಲ್ಲಿ ಉತ್ತರಪ್ರದೇಶದ ಹತ್ರಾಸ್‌ನಲ್ಲಿ ನಡೆದ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉಳಿದ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದೆ.

ಪ್ರಮುಖ ಆರೋಪಿ ಸಂದೀಪ್‌(20) ವಿರುದ್ಧ ಅತ್ಯಾಚಾರ ಮತ್ತು ಕೊಲೆ ಆರೋಪ ಸಾಬೀತಾಗಿಲ್ಲ ಎಂದು ಆತನ ಪರ ವಕೀಲ ಮುನ್ನಾ ಸಿಂಗ್‌ ಹೇಳಿದ್ದಾರೆ. ಉದ್ದೇಶ ಪೂರ್ವಕವಲ್ಲದ ಕೊಲೆ ಆರೋಪದ ಮೇರೆಗೆ ಆತನಿಗೆ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಲಾಗಿದೆ.

Also Read  ಎಸ್‍ಪಿಗೆ ಪತ್ರ ಬರೆದ ಹತ್ರಾಸ್ ಪ್ರಕರಣದ ಪ್ರಮುಖ ಆರೋಪಿ ➤ ಪತ್ರದಲ್ಲಿ ಏನಿದೆ ಗೋತ್ತೆ..?!

 

 

 

error: Content is protected !!
Scroll to Top