ಮೂವತ್ತಡಿ ಆಳದ ಬಾವಿಗೆ ಬಿದ್ದಿದ್ದ ಬೆಕ್ಕಿನಮರಿ ➤ ಅಗ್ನಿಶಾಮಕದಳದಿಂದ ರಕ್ಷಣಾ ಕಾರ್ಯ ಯಶಸ್ವಿ

(ನ್ಯೂಸ್ ಕಡಬ)newskadaba.com  ಚಿಕ್ಕಮಗಳೂರು, ಮಾ.03. ಮೂವತ್ತು ಅಡಿ ಅಳದ ತೆರೆದ ಬಾವಿಗೆ ಬಿದ್ದಿದ್ದ ಬೆಕ್ಕಿನ ಮರಿಯನ್ನು ಅಗ್ನಿಶಾಮಕದಳದ ಸಿಬ್ಬಂದಿ ಸುರಕ್ಷಿತವಾಗಿ ಕಾರ್ಯಚಾರಣೆ ನಡೆಸಿ ಜೀವ ಉಳಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.

ಓಡುವಾಗ ಆಯಾತಪ್ಪಿ ಬಾವಿಗೆ ಬಿದ್ದಿದ್ದ ಪುಟ್ಟ ಬೆಕ್ಕೊಂದನ್ನ ಅಗ್ನಿಶಾಮಕ ಸಿಬ್ಬಂದಿ ಸೊಂಟಕ್ಕೆ ಹಗ್ಗ ಕಟ್ಟಿಕೊಂಡು 30 ಅಡಿ ಆಳದ ಬಾವಿಗೆ ಇಳಿದು ಬೆಕ್ಕನ್ನು ರಕ್ಷಣೆ ಮಾಡಿದ್ದಾರೆ‌.

 

Scroll to Top