➤ ಕಡಬ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com. ಕಡಬ, ಮಾ 3. ಕೋಡಿಂಬಾಳ ಗ್ರಾಮದ ಕಜೆಮೂಲೆ ನಿವಾಸಿ ಮಹಮ್ಮದ್ ಆತ್ಮಹತ್ಯೆಗೆ ಶರಣಾದವರು. ಕೋಡಿಂಬಾಳದ  ಕಾರ್ಖಾನೆ ಎಂಬಲ್ಲಿ  ಮಾವಿನ ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರು ಸುಮಾರು 06 ವರ್ಷಗಳಿಂದ ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದು, ಯಾವುದೇ ಕೆಲಸ ಮಾಡಲು ಆಗದೆ ಇದ್ದುದರಿಂದ ಮಾನಸಿಕವಾಗಿ ನೊಂದಿದ್ದು, ಅದೇ ವಿಚಾರವಾಗಿ ಜೀವನದಲ್ಲಿ ಜಿಗುಪ್ಸೆಗೊಂಡು  ನೇಣು ಬಿಗಿದಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top