ಪ್ರಶಾಂತ್ ಮಾಡಾಳ್ ಬಂಧನ ಬೆನ್ನಲ್ಲೇ ಎಂ.ಡಿ.ಮನೆ ಮೇಲೆ ಲೋಕಾಯುಕ್ತ ದಾಳಿ !!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.03. ಲಂಚ ಸ್ವೀಕರಿಸುತ್ತಿದ್ದ ವೇಳೆ ಬಂಧಿಸಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಪುತ್ರ ಬೆಂಗಳೂರು ಜಲಮಂಡಳಿಯ (ಬಿಡ್ಲೂಎಸ್’ಎಸ್’ಬಿ) ಮುಖ್ಯ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಬಳಿ ಕೋಟಿಗಟ್ಟಲೆ ಹಣ ಪತ್ತೆಯಾಗಿದ್ದು ಆಡಳಿತ ಪಕ್ಷ ಬಿಜೆಪಿಗೆ ಕಂಟಕವಾಗಿ ಪರಿಣಮಿಸಿದೆ.


ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಗೆ (ಕೆಎಸ್’ಡಿಎಲ್) ರಾಸಾಯನಿಕ ಪೂರೈಸುವ ಟೆಂಡರ್ ನೀಡಲು 40 ಲಕ್ಷ ರೂ. ಪಡೆಯುತ್ತಿದ್ದ ವೇಳೆ ಪ್ರಶಾಂತ್ ಮಾಡಾಳ್ ಅವರನ್ನು ನಿನ್ನೆ ರಾತ್ರಿ ಮಿಂಚಿನ ಕಾರ್ಯಾಚರಣೆ ಕೈಗೊಂಡು ಬಂಧಿಸಿದ್ದ ಲೋಕಾಯುಕ್ತ ಅಧಿಕಾರಿಗಳು, ರಾತ್ರಿಯಿಡೀ ನಡೆಸಿದ ದಾಳಿಯಲ್ಲಿ ಪ್ರಶಾಂತ್ ಮನೆ ಹಾಗೂ ಕಚೇರಿಯಲ್ಲಿ ಪತ್ತೆಯಾಗಿರುವ 7.62 ಕೋಟಿ ರೂಗಳು ಜಪ್ತಿ ಮಾಡಿದ್ದಾರೆ.

Also Read  'ಕೊರೋನಾ ವಾರಿಯರ್ಸ್‌' ತಂಡವನ್ನು ಗೌರವಿಸಿದ ಚಂದ್ರಶೇಖರ ಸ್ವಾಮೀಜಿ ದಂಪತಿ ➤ ಗುಂಡ್ಯ ಚೆಕ್ ಪೋಸ್ಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗಳಿಗೆ ಗೌರವ

error: Content is protected !!
Scroll to Top