ಉಳ್ಳಾಲ: ಯುವಕನಿಗೆ ಚೂರಿಯಿಂದ ಇರಿದು ಕೊಲೆ ಯತ್ನ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಉಳ್ಳಾಲ, ಮಾ.04. ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರ ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಮೇಲೆ ಚೂರಿಯಿಂದ ಇರಿಯಲಾಗಿದೆ.ತಕ್ಷಣ ಅವರನ್ನು ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದಕತ್ತುಲ್ಲಾ ಮನೆಯಲ್ಲಿದ್ದ ಸಂದರ್ಭ ಎದುರುಗಡೆ ಕರೆಸಿ ಚೂರಿಯಿಂದ ಹೊಟ್ಟೆ ಭಾಗಕ್ಕೆ ಇರಿಯಲಾಗಿದೆ ಎನ್ನಲಾಗಿದೆ. ತಕ್ಷಣ ಮನೆಮಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Also Read  ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ➤`ಪ್ರಜಾ ಪ್ರಣಾಳಿಕೆ' ಬಿಡುಗಡೆ ಮಾಡಿದ ಕಾಂಗ್ರೆಸ್ 

 

 

error: Content is protected !!
Scroll to Top