ಸುಳ್ಯ: ಮನೆಗೆ ನುಗ್ಗಿ ಮಹಿಳೆಯ ಹತ್ಯೆಗೆ ಯತ್ನ ➤ ಕೆಲಸಕ್ಕೆ ಬಂದ ಕಾರ್ಮಿಕರಿಂದ ಕೃತ್ಯ

(ನ್ಯೂಸ್ ಕಡಬ)newskadaba.com ಸುಳ್ಯ, ಮಾ.04. ಕೆಲಸಕ್ಕೆ ಬಂದಿದ್ದ ಕಾರ್ಮಿಕರು ಮನೆಯಲ್ಲಿದ್ದವರನ್ನು ಹತ್ಯೆಗೈಯಲು ಯತ್ನಿಸಿದ ಘಟನೆ ತಾಲೂಕಿನ ಪಂಬೆತ್ತಾಡಿ ಗ್ರಾಮದ ಕರಿಕ್ಕಳ ಎಂಬಲ್ಲಿ ವರದಿಯಾಗಿದೆ.

ಕರಿಕ್ಕಳ ವಿಶ್ವನಾಥ ಮತ್ತು ಗಾಯತ್ರಿ ದಂಪತಿ ಮನೆಗೆ ಕೆಲಸಕ್ಕೆ ಬಂದವರು ಆಕ್ರಮಣ ನಡೆಸಿ ಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಮನೆಯವರು ಬೊಬ್ಬೆ ಹೊಡೆದ ಪರಿಣಾಮ ಅಕ್ಕಪಕ್ಕದ ಮನೆಯವರು ಬಂದ ಕಾರಣ ಅಪಾಯ ಉಂಟಾಗಲಿಲ್ಲ.

 

 

Scroll to Top