ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ KSRTC ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.04. ಮಾ. 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ (2nd PUC Exam)ಗಳು ಶುರುವಾಗಲಿದೆ ಎಂದು ವರದಿಯಾಗಿದೆ. ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿ ನೀಡಿದ್ದ ಮನವಿಗೆ ಕೆಎಸ್‌ಆರ್‌ಟಿಸಿ ( KSRTC) ಒಪ್ಪಿ ಸುತ್ತೋಲೆ ಹೊರಡಿಸಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ತಮ್ಮ ವಿದ್ಯಾಸಂಸ್ಥೆಗಳ ಕೇಂದ್ರಗಳ ಹೊರತಾಗಿ ಬೇರೆ ಸ್ಥಳಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಸಂಚರಿಸಲು ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಲಭ್ಯವಾಗಲಿದೆ ಎನ್ನಲಾಗಿದೆ.

ಈ ಹಿಂದೆಯೇ ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿಯು ಉಚಿತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ದಿನಗಳಲ್ಲಿ ಉಚಿತ ಬಸ್ ಸೇವೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮನವಿ ಮಾಡಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಬಸ್ ಸೇವೆ ಲಭ್ಯವಾಗಲಿದೆ.

Also Read  ಚಾಲಕನ ನಿಯಂತ್ರಣ ತಪ್ಪಿದ ಟೈಲ್ಸ್ ಲಾರಿ ► 11 ಜನರ ಮೃತ್ಯು, ಐವರು ಗಂಭೀರ

ಪರೀಕ್ಷಾ ದಿನ ಸಂಚರಿಸುವಾಗಿ ಬಸ್ ನಿರ್ವಾಹಕರಿಗೆ ಪರೀಕ್ಷೆಯ ಪ್ರವೇಶ ಪತ್ರ ತೋರಿಸುವುದು ಕಡ್ಡಾಯ ಮಾಡಲಾಗಿದ್ದು, ಇನ್ನೂ ಈ ಕುರಿತಂತೆ ಚಾಲಕ ಮತ್ತು ನಿರ್ವಾಹಕರಿಗೆ ಸೂಕ್ತ ತಿಳುವಳಿಕೆ ನೀಡುವಂತೆ ನಿಗಮ ಸಲಹೆ ಸೂಚನೆಯನ್ನು ನೀಡಲಾಗಿದೆ.

 

 

error: Content is protected !!
Scroll to Top