ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದ ► ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.01. ಪ್ರೇಮ ವೈಫಲ್ಯಗೊಂಡ ಹಿನ್ನೆಲೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ಎಂಬಲ್ಲಿ ಸೋಮವಾರದಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಂಗಳೂರಿನ ಪಿಯು ಕಾಲೇಜು ವಿದ್ಯಾರ್ಥಿನಿ ರುಬೀನಾ(17) ಎಂದು ಗುರುತಿಸಲಾಗಿದೆ. ನವೆಂಬರ್ ತಿಂಗಳಿನಲ್ಲಿ ತನ್ನದೇ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಆಕೆಯ ಪ್ರಿಯಕರ ಪಿಲಾರು ನಿವಾಸಿ ಅರ್ಫಾಝ್ ಆತ್ಮಹತ್ಯೆ ಮಾಡಿಕೊಂಡಿದ್ದನೆನ್ನಲಾಗಿದ್ದು, ಅದರಿಂದ ಮನನೊಂದ ರುಬೀನಾ ಸೋಮವಾರದಂದು ತನ್ನ ಮನೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Scroll to Top