(ನ್ಯೂಸ್ ಕಡಬ) newskadaba.com. ನವದೆಹಲಿ, ಮಾ 4. ಮೂಲಸೌಕರ್ಯ ಅಭಿವೃದ್ಧಿಯನ್ನು ಆರ್ಥಿಕತೆಯ ಪ್ರೇರಕ ಶಕ್ತಿ ಎಂದು ಸರ್ಕಾರ ಪರಿಗಣಿಸುತ್ತದೆ ಮತ್ತು ಇದು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವಾಗಲು ಸಹಾಯ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
ಮೂಲಸೌಕರ್ಯ ಮತ್ತು ಹೂಡಿಕೆ ಕುರಿತು ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ವರ್ಷದ ಬಜೆಟ್ ದೇಶದ ಮೂಲಸೌಕರ್ಯ ಕ್ಷೇತ್ರದ ಬೆಳವಣಿಗೆಗೆ ಹೊಸ ಶಕ್ತಿಯನ್ನು ನೀಡಲಿದೆ ಎಂದು ಹೇಳಿದರು. ‘ನಾವು ಮೂಲಸೌಕರ್ಯ ಅಭಿವೃದ್ಧಿಯನ್ನು ಆರ್ಥಿಕತೆಯ ಪ್ರೇರಕ ಶಕ್ತಿ ಎಂದು ಪರಿಗಣಿಸುತ್ತೇವೆ; ಈ ಮಾರ್ಗವನ್ನು ಅನುಸರಿಸುವ ಮೂಲಕ ಭಾರತವು 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಗುರಿಯನ್ನು ಸಾಧಿಸುತ್ತದೆ‘ ಎಂದು ಮೋದಿ ಹೇಳಿದರು.
ಈಗ ಈ ಅಭಿವೃದ್ಧಿಯ ವೇಗವನ್ನು ಹೆಚ್ಚಿಸುವ ಮತ್ತು ಟಾಪ್ ಗೇರ್‌ನಲ್ಲಿ ಚಲಿಸುವ ಅವಶ್ಯಕತೆಯಿದೆ. ಮತ್ತು ಇದರಲ್ಲಿ ಪ್ರಧಾನ ಮಂತ್ರಿ ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಯೋಜನೆ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಹೇಳಿದರು.