ಶಾಲೆಯಲ್ಲಿ ಆಟದ ಮೈದಾನ ಕಡ್ಡಾಯ ➤ ಸುಪ್ರೀಂಕೋರ್ಟ್‌ ಆದೇಶ

(ನ್ಯೂಸ್ ಕಡಬ)newskadaba.com  ನವದೆಹಲಿ, ಮಾ.04. ಆಟದ ಮೈದಾನವಿಲ್ಲದೆ ಶಾಲೆ ಇರುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ಶುಕ್ರವಾರ ಅಭಿಪ್ರಾಯಪಟ್ಟಿದೆ. ಇದೇ ವೇಳೆ, ಹರಿಯಾಣದ ಯಮುನಾ ನಗರದಲ್ಲಿರುವ ಶಾಲೆಯ ಆವರಣದ ಅತಿಕ್ರಮಣವನ್ನು ತೆರವುಗೊಳಿಸುವಂತೆ ಕೋರ್ಟ್‌ ಆದೇಶಿಸಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಆರ್‌.ಶಾ ಮತ್ತು ಬಿ.ವಿ.ನಾಗರತ್ನ ಅವರಿದ್ದ ದ್ವಿಸದಸ್ಯ ನ್ಯಾಯಪೀಠವು, ‘ಶಾಲೆಯ ಭೂಮಿಯನ್ನು ಮಾರುಕಟ್ಟೆಯ ಬೆಲೆಗೆ ಅತಿಕ್ರಮಣದಾರರಿಗೆ ಮಾರಾಟ ಮಾಡಿ ಭೂಮಿಯನ್ನು ಸಕ್ರಮ ಮಾಡಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ 2016ರಲ್ಲಿ ಆದೇಶ ನೀಡಿರುವುದು ‘ಗಂಭೀರವಾದ ತಪ್ಪು’ ಎಂದು ಅಭಿಪ್ರಾಯಪಟ್ಟಿದೆ.

Also Read  ಉತ್ತರಪ್ರದೇಶ: ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 10 ನವಜಾತ ಶಿಶುಗಳ ಸಜೀವ ದಹನ

 

error: Content is protected !!
Scroll to Top