ವಿದ್ಯಾರ್ಥಿಗಳು ಕೇವಲ ಅಂಕಗಳನ್ನು ಪಡೆಯುವ ಯಂತ್ರಗಳಾಗಬಾರದು: ಶಕುಂತಲಾ ಶೆಟ್ಟಿ ► ಕಡಬದ ಏಮ್ಸ್ ಕಾಲೇಜಿನ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಜ. 01. ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆದು ಒಳ್ಳೆಯ ಅಂಕಗಳನ್ನು ಪಡೆಯಬೇಕೇ ವಿನಹಃ ಅಂಕಗಳನ್ನು ಪಡೆಯುವ ಯಂತ್ರಗಳಾಗಬಾರದು ಎಂದು ರಾಜ್ಯ ಸರಕಾರದ ಸಂಸದೀಯ ಕಾರ್ಯದರ್ಶಿ ಶ್ರೀಮತಿ ಶಕುಂತಲಾ ಶೆಟ್ಟಿ ಹೇಳಿದರು.

ಅವರು ಸೋಮವಾರದಂದು ಕಡಬ ಏಮ್ಸ್ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜಕ್ಕೆ ಬೇಕಾಗಿರುವುದು ಪದವಿ ಅಲ್ಲ‌. ಬದಲಾಗಿ ತಾನು ಪಡೆದಿರುವ ಪದವಿಯಲ್ಲಿ ಸಮಾಜಕ್ಕೆ ಏನು ಕೊಟ್ಟಿದ್ದೇನೆ ಎನ್ನುವುದನ್ನು ತಿಳಿದುಕೊಂಡು ಉತ್ತಮ ಪ್ರಜೆಗಳಾಗಿ ಸಮಾಜದಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸಬೇಕೆಂದರು.

ಸಂಸ್ಥೆಯ ಅಧ್ಯಕ್ಷೆಯಾದ ಕು| ಮರಿಯಂ ಫೌಝಿಯಾ ಬಿ.ಎಸ್. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ಬಿ.ಎಂ.ಫಾರೂಕ್, ಟ್ಯಾಲೆಂಟ್‌ ರಿಸರ್ಚ್ ಫೌಂಡೇಶನ್ ಸ್ಥಾಪಕಾಧ್ಯಕ್ಷ ಅಬ್ದುರ್ರವೂಫ್ ಪುತ್ತಿಗೆ, ಮಂಗಳೂರಿನ ಕಾರ್ಪೊರೇಟರ್ ನಾಸೀರ್, ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಇ.ಸಿ. ಚೆರಿಯನ್, ಎ.ಎಂ.ಎಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಅಬ್ಬಾಸ್ ಬಾಜಿನಡಿ, ಬಡಿಲ ಹುಸೇನ್, ಮಹಮ್ಮದ್ ಕುಕ್ಕುವಳ್ಳಿ ಮೊದಲಾದವರು ಉಪಸ್ಥಿತರಿದ್ದರು.

Also Read  ಅಂಧ ಅಭ್ಯರ್ಥಿಗಳ ಷರತ್ತು ರದ್ದು

ಕಾರ್ಯಕ್ರಮದಲ್ಲಿ ಕಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಕುಲಪತಿ ಡಾ| ಚಿನ್ನಪ್ಪ ಗೌಡ ಹಾಗೂ ಅನಕ್ಷರಸ್ಥನಾಗಿದ್ದುಕೊಂಡು ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದ ಹರೇಕಳ ಹಾಜಬ್ಬರನ್ನು ಸನ್ಮಾನಿಸಲಾಯಿತು.

error: Content is protected !!
Scroll to Top