60 ವರ್ಷದ ಮಹಿಳೆ ಮೇಲೆ ಅತ್ಯಾಚಾರ !          ➤ ಇಬ್ಬರು ಯುವಕರ ಬಂಧನ

(ನ್ಯೂಸ್ ಕಡಬ)newskadaba.com ವಿಜಯಪುರ, ಮಾ.04. ವಿಜಯಪುರ ಜಿಲ್ಲೆಯಲ್ಲಿ 60 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಬಂಧಿಸಲಾಗಿದೆ.

ಬಂಧಿತರನ್ನು ಸದ್ದಾ ಶೇಕ್ ಮತ್ತು ರವಿ ಎಂದು ಗುರುತಿಸಲಾಗಿದ್ದು, ಇವರು ರದ್ದಿ ಅಂಗಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತೆಯ ಸ್ಥಿತಿ ಗಂಭೀರವಾಗಿದೆ. ಸಂತ್ರಸ್ತೆ ಜೋರಾಪುರ ಪೇಟೆಯ ದೇವಸ್ಥಾನದಲ್ಲಿ ಭಕ್ತರು ನೀಡುವ ಭಿಕ್ಷೆಯಿಂದ ಜೀವನ ಸಾಗಿಸುತ್ತಿದ್ದರು.

Scroll to Top