ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ➤ ಮತ್ತೋರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 05. ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.


ಬಂಧಿತನನ್ನು ತೌಫೀಲ್​ ಎಂದು ಗುರುತಿಸಲಾಗಿದೆ. ಎನ್‌ಐಎ ಅಧಿಕಾರಿಗಳು ಮಾ. 04ರಂದು ರಾತ್ರಿ 9.30ರ ವೇಳೆ ಅಮೃತಹಳ್ಳಿ ಠಾಣಾ ವ್ಯಾಪ್ತಿಯ ದಾಸರಹಳ್ಳಿ ಎಂಬಲ್ಲಿ ಬಂಧಿಸಿರುವುದಾಗಿ ವರದಿಯಾಗಿದೆ. ಎನ್‌ಐಎ ಅಧಿಕಾರಿಗಳು ಆರೋಪಿಗಳ ಪತ್ತೆಗೆ 5 ಲಕ್ಷ ಹಣ ಬಹುಮಾನ ಘೋಷಣೆ ಮಾಡಿದ್ದರು. ಪ್ರವೀಣ್ ನೆಟ್ಟಾರು ಅವರನ್ನು ಜುಲೈ 26 ರಂದು ಆತನ ಕೋಳಿ ಅಂಗಡಿಯ ಬಳಿ ಹಂತಕರು ಬರ್ಬರವಾಗಿ ಕೊಲೆ ಮಾಡಿದ್ದರು. ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ನೆಟ್ಟಾರು ಮೃತಪಟ್ಟಿದ್ದರು. ಆರೋಪಿಗಳು ಪರಾರಿಯಾಗಿದ್ದರು.

Also Read  ಚಿಕ್ಕಮಗಳೂರು: ಬೈಕ್ ಕಾರು ಢಿಕ್ಕಿ ► ಕಡಬದ ವ್ಯಕ್ತಿ ಗಂಭೀರ

error: Content is protected !!
Scroll to Top