ಉಗ್ರರಿಗೆ ಹಣಕಾಸಿನ ನೆರವು ಆರೋಪ ➤ ದ.ಕ. ಜಿಲ್ಲೆಯ ವಿವಿಧೆಡೆ ಎನ್ಐಎ ದಾಳಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 06. ಬಿಹಾರದ ಪಾಟ್ನಾದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ಬಾಂಬ್ ಇರಿಸಲು ಯತ್ನಿಸಿ ಬಂಧಿತರಾದ ಉಗ್ರರಿಗೆ ಹಣಕಾಸಿನ ನೆರವು ನೀಡಿರುವ ವಿಚಾರಕ್ಕೆ ಸಂಬಂಧಿಸಿ ಎನ್ ಐ ಎ ಸಂಜೆ ಬಂಟ್ವಾಳ, ಪುತ್ತೂರಿನಲ್ಲಿ ಹಲವು ಮನೆಗಳಿಗೆ ದಾಳಿ ನಡೆಸಿದೆ.

ಪಾಟ್ನಾ ದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮವನ್ನು ವಿಫಲಗೊಳಿಸಬೇಕು ಎಂಬ ನಿಟ್ಟಿನಲ್ಲಿ ಬಾಂಬ್ ಇಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿ ಹಣಕಾಸಿನ ನೆರವು ಒದಗಿಸಿದ ಬಂಟ್ವಾಳ ಮ‌ೂಲದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ ತಂಡ ದಾಳಿ ನಡೆಸಿ ತನಿಖೆ ನಡೆಸುತ್ತಿದೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕರ ವಿವಿಧ ಖಾತೆಗಳಿಗೆ ಕೋಟ್ಯಾಂತರ ರೂಪಾಯಿ ಹಣದ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಇವರ ಮೇಲಿದೆ ಎನ್ನಲಾಗಿದ್ದು, ಈ ಹಿನ್ನೆಲೆ ಎನ್.ಐ.ಎ ತಂಡವು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ ಎನ್ನಲಾಗಿದೆ.

Also Read  ಸೂರಿಕುಮೇರು: ಟ್ಯಾಂಕರ್ ಪಲ್ಟಿ ➤ 10 ಗಂಟೆಗಳ ಬಳಿಕ ವಾಹನ ಸಂಚಾರ ಮುಕ್ತ

error: Content is protected !!
Scroll to Top