ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ !      ➤ ಆಟೋ ಚಾಲಕ ಪುರುಷೋತ್ತಮರವರಿಗೆ ಹೊಸ ರಿಕ್ಷಾ, 5 ಲಕ್ಷ ಸಹಾಯಧನ ಹಸ್ತಾಂತರ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 06. ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಗಾಯಾಳು ಆಟೋ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಹೊಸ ಆಟೋ ರಿಕ್ಷಾ ಹಾಗೂ 5 ಲಕ್ಷ ರೂ.ನೆರವನ್ನು ನೀಡಿರುವ ಕುರಿತು ಎಂದು ವರದಿಯಾಗಿದೆ.

ಪುರುಷೋತ್ತಮ ಪೂಜಾರಿ ಅವರ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಹೊಸ ರಿಕ್ಷಾ ಹಾಗೂ 5 ಲಕ್ಷ ರೂ. ಗಳ ಚೆಕ್ ಹಸ್ತಾಂತರಿಸಿದ್ದಾರೆ. ಕಳೆದ ನವೆಂಬರ್ ನಲ್ಲಿ ಮಂಗಳೂರಿನ ಪಂಪ್ ವೆಲ್ ಬಳಿ ಆಟೋವೊಂದರಲ್ಲಿ ಕುಕ್ಕರ್ ಬಾಂಬ್ ಸ್ಪೋಟಗೊಂಡಿತ್ತು. ಶಂಕಿತ ಶಾರೀಕ್ ಸೇರಿದಂತೆ ಆಟೋ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಗಾಯಗೊಂಡಿದ್ದರು. ಸದ್ಯ ಶಂಕಿತ ಶಾರಿಕ್ ಎನ್.ಐ.ಎ ವಶದಲ್ಲಿದ್ದಾನೆ.

Also Read   ಐವರು  ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ದೃಢ➤ ಮೂಡಬಿದಿರೆ ಪೊಲೀಸ್ ಠಾಣೆ ಸೀಲ್ ಡೌನ್... !!!

 

error: Content is protected !!
Scroll to Top