ಪುತ್ತೂರು: ಎನ್ಐಎ ತಂಡದ ಪೊಲೀಸ್ ಜೀಪ್ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸಿಎ ಬ್ಯಾಂಕ್ ಸಿಇಒ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 06. ಎನ್ಐಎ ತಂಡ ಸಂಚರಿಸುತ್ತಿದ್ದ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಪುತ್ತೂರಿನಲ್ಲಿ ನಡೆದಿದೆ.

ಮೃತರನ್ನು ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ ನಾಯ್ಕ ಬಿ. (50) ಎಂದು ಗುರುತಿಸಲಾಗಿದೆ. ಸುಳ್ಯ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಜಿಲ್ಲೆಯ ಡಿ.ಆರ್ ಗೆ ಸೇರಿದ ಪೊಲೀಸ್ ವಾಹನ ಹಾಗೂ ಪುತ್ತೂರಿನಿಂದ ಆರ್ಲಪದವು ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ನಂತೂರು ಫ್ಲೈಓವರ್ ನಿರ್ಮಾಣಕ್ಕೆ 600 ಮರಗಳ ಮಾರಣಹೋಮ - ಪರಿಸರ ಪ್ರೇಮಿಗಳಿಂದ ತೀವ್ರ ಆಕ್ರೋಶ

error: Content is protected !!