ಬಿಹಾರದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು    ➤  ಬಂಟ್ವಾಳದ ಐವರು NIA ವಶಕ್ಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.06.  ಬಿಹಾರದಲ್ಲಿ ಪ್ರಧಾನಿ ಮೋದಿ ಆಗಮನ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಟ್ವಾಳ ತಾಲೂಕಿನ ನಂದಾವರದಲ್ಲಿ ದಿಢೀರ್ ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ.

ನಾಲ್ಕು ತಂಡಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು ವಿಧ್ವಂಸಕ ಕೃತ್ಯಕ್ಕೆ ಹಣಕಾಸು ನೆರವು ಒದಗಿಸಿದ ಆರೋಪದಲ್ಲಿ ಐವರನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ. ನಂದಾವರದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್ ಮತ್ತು ನೌಫಲ್ ಎಂಬವರ ಮನೆಗೆ ದಾಳಿ ನಡೆಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಇವರು ಹಲವರ ಬ್ಯಾಂಕ್ ಖಾತೆಗಳಿಗೆ ನಿರಂತರ ಹಣ ರವಾನೆ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದ್ದಾರೆ.‌ ಇವರ ಬ್ಯಾಂಕ್ ವ್ಯವಹಾರದ ಮೇಲೆ ಹಲವು ಸಮಯದಿಂದ ಅಧಿಕಾರಿಗಳು ಕಣ್ಣಿಟ್ಟಿದ್ದರು. ಇದೇ ವೇಳೆ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Also Read  ವಿಶ್ವದಾಖಲೆ ಬರೆದ ಅಯೋಧ್ಯೆ ದೀಪೋತ್ಸವ; 25 ಲಕ್ಷಕ್ಕೂ ಅಧಿಕ ಬೆಳಗಿದ ದೀಪಗಳು..!

 

error: Content is protected !!
Scroll to Top