ಸಿಲಿಂಡರ್ ಸ್ಫೋಟ..!     ➤  ಛಿದ್ರವಾಗಿ ಹೋಯ್ತು ಬಾಲಕನ ದೇಹ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.06. ಸಿಲಿಂಡರ್ ಸ್ಫೋಟಗೊಂಡು 13 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಹೆಬ್ಬಾಳ ಸಮೀಪದ ಗುಡ್ಡದಹಳ್ಳಿಯಲ್ಲಿ ಇಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ನಡೆದಿದೆ. ಆರನೇ ತರಗತಿಯಲ್ಲಿ ಓದುತಿದ್ದ ಮಹೇಶ್(13) ಮೃತಪಟ್ಟ ಬಾಲಕ ಎಂದು ತಿಳಿದುಬಂದಿದೆ.

ಸಿಲಿಂಡರ್ ಫಿಲ್ಲಿಂಗ್ ಅಂಗಡಿಯಲ್ಲಿ ಘಟನೆ ನಡೆದಿದ್ದು, ಅಂಗಡಿ ಪಕ್ಕದಲ್ಲಿ ಬಾಲಕ ಮಹೇಶ್ ನಿಂತಿದ್ದ. ಸ್ಫೋಟದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

 

Scroll to Top