H3N2 ವೈರಸ್‍ ಬಗ್ಗೆ ಆತಂಕ ಬೇಡ.!     ➤  ಡಾ.ಕೆ.ಸುಧಾಕರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.06. ದೇಶಾದ್ಯಂತ ವ್ಯಾಪಕವಾಗಿ ಹರಡಿರುವ ಎಚ್3 ಎನ್2 ವೈರಸ್‍ ರಾಜ್ಯದಲ್ಲಿ ಇದುವರೆಗೂ ಕಂಡು ಬಂದಿಲ್ಲದ ಕಾರಣ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.


ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ ಸೈಕಲ್ ಜಾಥಾಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈ ವೈರಸ್ ಬಗ್ಗೆ ಕೈಗೊಳ್ಳಬೇಕಾದ ನಿಯಂತ್ರಣ ಕ್ರಮಗಳು ಹಾಗೂ ಚಿಕಿತ್ಸೆ ಕುರಿತಂತೆ ತಜ್ಞರು ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ನಾಳೆ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದರು.

Also Read  ಸಾಲದ ವಿಚಾರವಾಗಿ ಪತಿಯೊಂದಿಗೆ ಗಲಾಟೆ.! ➤ಪತ್ನಿ ಆತ್ಮಹತ್ಯೆ

error: Content is protected !!
Scroll to Top