ಉದ್ಯೋಗಿಗಳ ವಜಾದ ಬಳಿಕ ಅಧ್ಯಕ್ಷನನ್ನೇ ತೆಗೆದು ಹಾಕಿದ ಝೂಮ್…!



(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಮಾ. 06. ಇತ್ತೀಚೆಗೆಷ್ಟೇ ಹಲವು ಉದ್ಯೋಗಿಗಳನ್ನು ವಜಾಗೊಳಿಸಿದ್ದ ವೀಡಿಯೊ ಕಾನ್ಫರೆನ್ಸಿಂಗ್ ಪ್ಲಾಟ್‌ಫಾರ್ಮ್ ಜೂಮ್ ಕಂಪನಿಯು ಇದೀಗ ತನ್ನ ಅಧ್ಯಕ್ಷ ಗ್ರೆಗ್ ಟಾಂಬ್ ಅವರನ್ನು ವಜಾಗೊಳಿಸಿದೆ.







ಇತ್ತೀಚೆಗಷ್ಟೇ ಕಂಪನಿಯು ತನ್ನ 1,300 ಉದ್ಯೋಗಿಗಳನ್ನು ವಜಾಗೊಳಿಸಿತ್ತು. ಇದರ ಬೆನ್ನಲ್ಲೇ 2022ರ ಜೂನ್ ತಿಂಗಳಿನಲ್ಲಿ ಅಧ್ಯಕ್ಷ ಸ್ಥಾನಕ್ಕೇರಿದ್ದ ಟಾಂಬ್‌ ರನ್ನು ಹಠಾತ್ತನೆ ವಜಾಗೊಳಿಸಿದೆ. ಮುಂದಿನ ಅಧ್ಯಕ್ಷ ಸ್ಥಾನವನ್ನು ಯಾರು ತುಂಬಲಿದ್ದಾರೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಜೂಮ್ ಕಂಪನಿ 2011ರಲ್ಲಿ ಸ್ಥಾಪನೆಯಾಗಿದ್ದು, ಕೋವಿಡ್ ಲಾಕ್‌ಡೌನ್ ವೇಳೆ ಕಂಪನಿಗಳ ಮೀಟಿಂಗ್ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಜೂಮ್ ಅತ್ಯಂತ ಉಪಯುಕ್ತವಾಗಿತ್ತು. ಇದೀಗ ಲಾಕ್‌ಡೌನ್ ಕಳೆದು, ಬೇಡಿಕೆ ಕಡಿಮೆಯಾಗುತ್ತಿದ್ದಂತೆಯೇ ಕಂಪನಿಯನ್ನು ಆರ್ಥಿಕವಾಗಿ ನಿಭಾಯಿಸಲು ಉದ್ಯೋಗಿಗಳನ್ನು ವಜಾಗೊಳಿಸಲು ಪ್ರಾರಂಭಿಸಿದೆ.






error: Content is protected !!
Scroll to Top