➤ 2023 ಕೃಷಿ ಇಲಾಖೆ ನೇಮಕಾತಿ ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com. ಮಂಗಳೂರು.  ಕರ್ನಾಟಕ ರಾಜ್ಯ ಕೃಷಿ ಇಲಾಖೆಯು (KSDA) ತಾಂತ್ರಿಕ ಸಲಹೆಗಾರರ ​​ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 3 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್  ಮೂಲಕ ಅರ್ಜಿ ಸಲ್ಲಿಸಬಹುದು. ಅಂದರೆ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಕೃಷಿ ಇಲಾಖೆ ( KSDA )

ಹುದ್ದೆಗಳ ಸಂಖ್ಯೆ: 03

ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ

ಹುದ್ದೆಯ ಹೆಸರು: ತಾಂತ್ರಿಕ ಸಲಹೆಗಾರ

ಶೈಕ್ಷಣಿಕ ಅರ್ಹತೆ:

KSDA ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು. ಹಾಗೆಯೇ ಅಭ್ಯರ್ಥಿಗಳು ಕ್ಷೇತ್ರ ಮಟ್ಟದಲ್ಲಿ 05 ವರ್ಷಗಳ ಅನುಭವ ಹೊಂದಿರಬೇಕು.

Also Read  ಉದ್ಯೋಗಿಯನ್ನು ಮರವೊಂದಕ್ಕೆ ಕಟ್ಟಿ ಹಾಕಿ ಹಲ್ಲೆ    ➤ ದೂರು ದಾಖಲು

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಅಂಚೆಯ ಮೂಲಕ ಕಳುಹಿಸಬೇಕಾಗುತ್ತದೆ. ಅರ್ಜಿ ಕಳುಹಿಸಬೇಕಾದ ವಿಳಾಸ ಈ ಕೆಳಗಿನಂತಿದೆ.

ಅರ್ಜಿ ಕಳುಹಿಸಬೇಕಾದ ವಿಳಾಸ:

 

Director of Agriculture,

Commissionerate of Agriculture,

Seshadri Road, Bengaluru-01

 

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 20, 2023

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ. ಹಾಗೆಯೇ ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 080-22074161 ಅನ್ನು ಸಂಪರ್ಕಿಸಬಹುದು.

error: Content is protected !!
Scroll to Top