(ನ್ಯೂಸ್ ಕಡಬ) newskadaba.com. ವಾಷಿಂಗ್ಟನ್, ಮಾ 06. ವೀಡಿಯೊ ಕಾನ್ಫರೆನ್ಸಿಂಗ್ ಪ್ಲಾಟ್‌ಫಾರ್ಮ್ ಜೂಮ್ ತನ್ನ ಅಧ್ಯಕ್ಷ ಗ್ರೆಗ್ ಟಾಂಬ್ ಅವರನ್ನು ವಜಾಗೊಳಿಸಿದೆ.
ಟಾಂಬ್ 2022ರ ಜೂನ್ ತಿಂಗಳಿನಲ್ಲಿ ಜೂಮ್‌ಗೆ ಸೇರ್ಪಡೆಯಾಗಿದ್ದರು. ಇತ್ತೀಚೆಗಷ್ಟೇ ಕಂಪನಿ ತನ್ನ 1,300 ಉದ್ಯೋಗಿಗಳನ್ನು ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಕಂಪನಿ 10 ತಿಂಗಳ ಹಿಂದೆ ಅಧ್ಯಕ್ಷ ಸ್ಥಾನಕ್ಕೇರಿದ್ದ ಟಾಂಬ್‌ರನ್ನು ಹಠಾತ್ತನೆ ವಜಾಗೊಳಿಸಿದೆ. ಇದೀಗ ಜೂಮ್‌ನ ಮುಂದಿನ ಅಧ್ಯಕ್ಷ ಸ್ಥಾನವನ್ನು ಯಾರು ತುಂಬಲಿದ್ದಾರೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ.
ಜೂಮ್ ಕಂಪನಿ 2011ರಲ್ಲಿ ಸ್ಥಾಪನೆಯಾಗಿದ್ದು, ಕೋವಿಡ್ ಲಾಕ್‌ಡೌನ್ ವೇಳೆ ಕಂಪನಿಗಳ ಮೀಟಿಂಗ್ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಜೂಮ್ ಅತ್ಯಂತ ಉಪಯುಕ್ತವಾಗಿತ್ತು. ಇದೀಗ ಲಾಕ್‌ಡೌನ್ ಕಳೆದು, ಬೇಡಿಕೆ ಕಡಿಮೆಯಾಗುತ್ತಿದ್ದಂತೆ ಕಂಪನಿಯನ್ನು ಆರ್ಥಿಕವಾಗಿ ನಿಭಾಯಿಸಲು ಉದ್ಯೋಗಿಗಳನ್ನು ವಜಾಗೊಳಿಸಲು ಪ್ರಾರಂಭಿಸಿದೆ.