ಮಂಗಳೂರು: ಕೇಂದ್ರ ಮಾರುಕಟ್ಟೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 06. ಇಲ್ಲಿನ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಿರ್ಮಾಣವಾಗುತ್ತಿರುವ ಕೇಂದ್ರ ಮಾರುಕಟ್ಟೆಯ ನಿರ್ಮಾಣ ಕಾಮಗಾರಿಗೆ ಮಾ. 05ರಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್, ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಜಯಾನಂದ ಅಂಚನ್ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಉಪಮೇಯರ್ ಪೂರ್ಣಿಮಾ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರು, ಪಾಲಿಕೆಯ ಕಾಪೋರೇಟರ್ ಗಳಾದ ಪ್ರೇಮಾನಂದ ಶೆಟ್ಟಿ ಹಾಗೂ ಇತರರು ಸ್ಮಾರ್ಟ್ ಸಿಟಿ ಅಧಿಕಾರಿಗಳಾದ ಅರುಣ್ ಪ್ರಭಾ, ಲಿಂಗೇಗೌಡ ಇದ್ದರು.

Also Read  ಲಾಂಗ್ ಹಿಡಿದು ಉಪನ್ಯಾಸಕನನ್ನೇ ಬೆದರಿಸಿದ ವಿದ್ಯಾರ್ಥಿ

error: Content is protected !!
Scroll to Top