ಸುಳ್ಯ: ನಾಳೆ (ಮಾ. 07) ವಿದ್ಯುತ್ ಕಡಿತ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 06. ತುರ್ತು ನಿಯತಕಾಲಿಕ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ.07ರಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಕಡಿತವುಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

33/11 ಕೆ.ವಿ. ಸುಳ್ಯ ವಿದ್ಯುತ್‌ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್ ಗಳಲ್ಲಿ ನಿರ್ವಹಣಾ ಕೆಲಸವನ್ನು ಹಮ್ಮಿಕೊಳ್ಳಲಾಗಿದೆ. 11 ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ಸಂಪಾಜೆ, ಕೋಲ್ಚಾರ್ , ಕಾವು ಅಜ್ಜಾವರ, ಕೇನ್ಯ, ಅರಂತೋಡು ಹಾಗೂ ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯ ತನಕ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಸುಳ್ಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.

Also Read  ಫಾಝಿಲ್ ಕೊಲೆ ಪ್ರಕರಣ ➤ 6 ಮಂದಿ ಸೆರೆ- ಕಮಿಷನರ್ ಶಶಿಕುಮಾರ್

error: Content is protected !!
Scroll to Top